ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು.
ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರಿಗೆ ಇದ್ದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದ ಶಾಸಕರು, ಅರ್ಹ ವೃದ್ಧರಿಗೆ ವೃದ್ಧಾಪ್ಯ ವೇತನದ ಪತ್ರಗಳನ್ನು ವಿತರಣೆ ಮಾಡಿದರು. ಅಲ್ಲದೇ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಣೆ ಮಾಡಿದರು.
ಜನಸ್ಪಂದನಾ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಮಂತರ್ ಗೌಡ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿಕೊಡುತ್ತೇವೆ ಎಂಬ ಸಬೂಬುಗಳು ಬೇಡ. ಕೆಲಸ ಆಗುವುದಿದ್ದಲ್ಲಿ ಕೂಡಲೇ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…