ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜೂ.3ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.
ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು ಮೊ.ಸಂ. 9845659909, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ,ಮೊ.ಸಂ. 9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಮೊ.ಸಂ. 9901262635, ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೋಕ್ಲು ಮೊ.ಸಂ. 9686597448, ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ ಮೊ.ಸಂ 9945707234, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ ಮೊ.ಸಂ 9611307646, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಂಗದೂರು ಮೊ.ಸಂ. 8105657451, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ ದೂ.ಸಂ. 7892795624 , ವಸತಿ ಶಾಲೆ, ಹುದಿಕೇರಿ ಮೊ.ಸಂ. 8861572215 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.





