ಕೊಡಗು

JOB ALLERT : ಅತಿಥಿ ಶಿಕ್ಷಕರು ,ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜೂ.3ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.

ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು ಮೊ.ಸಂ. 9845659909, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ,ಮೊ.ಸಂ. 9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಮೊ.ಸಂ. 9901262635, ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೋಕ್ಲು ಮೊ.ಸಂ. 9686597448, ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ ಮೊ.ಸಂ 9945707234, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ ಮೊ.ಸಂ 9611307646, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಂಗದೂರು ಮೊ.ಸಂ.  8105657451, ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ ದೂ.ಸಂ. 7892795624 , ವಸತಿ ಶಾಲೆ, ಹುದಿಕೇರಿ ಮೊ.ಸಂ. 8861572215 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

43 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

48 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

57 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago