ಕೊಡಗು

ಕಾವೇರಿ ಮಾತೆಯ ಕರುಣೆಯಿಂದ ಕರುನಾಡು ಸುಭೀಕ್ಷ: ಸಚಿವ ಎನ್‌ ಎಸ್‌ ಭೋಸರಾಜು

-ಕೊಡಗಿನ ತಲಕಾವೇರಿಯಲ್ಲಿ ತುಲಾಸಂಕ್ರಮಣ ಪವಿತ್ರ ತೀರ್ಥೋಧ್ಭವದಲ್ಲಿ ಭಾಗಿ
-ನಾಡಿನ ಸಮಸ್ತ ಜನತೆಗೆ ಹಾಗೂ ರೈತರಿಗೆ ಒಳಿತು ಮಾಡಲು ಪ್ರಾರ್ಥನೆ

ತಲಕಾವೇರಿ: ಕಾವೇರಿ ತಾಯಿಯ ಕೃಪೆಯಿಂದ ಕರುನಾಡು ಸುಭೀಕ್ಷವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಅಭಿಪ್ರಾಯಪಟ್ಟರು.

ಇಂದು ಕೊಡಗಿನ ತಲಕಾವೇರಿಯಲ್ಲಿ ನಡೆದ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವಲ್ಲಿ ಭಾಗವಹಿಸಿ ಜೀವ ನದಿ ಕಾವೇರಿಯ ತೀರ್ಥೋಧ್ಬವ ಕ್ಷಣಗಳನ್ನು ಕಣ್ತುಂಬಿಕೊಂಡರು. ನಂತರ ಮಾತನಾಡಿದ ಅವರು, ನಮ್ಮ ನಾಡಿನ ಜೀವ ನದಿ ಕಾವೇರಿ. ಕಾವೇರಿ ತಾಯಿಯ ಕೃಪೆಯಿಂದ ನಮ್ಮ ಕರುನಾಡು ಸುಭೀಕ್ಷವಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ಅಣೆಕಟ್ಟುಗಳು, ಕೆರೆಗಳು ತುಂಬಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ನದಿ ಪಾತ್ರದಲ್ಲೂ ಉತ್ತಮ ಮಳೆಯಾಗಿದ್ದು ನಮ್ಮ ಮೈಸೂರು ಭಾಗದ ಜನತೆಗೆ ಉತ್ತಮ ನೀರು ಲಭ್ಯವಾಗಿದೆ. ಕಾವೇರಿ ಮಾತೆಯ ಕೊಡುಗೆ ನಮ್ಮ ನಾಡಿನ ಮೇಲೆ ಅಪಾರವಾಗಿದೆ.

ಅತ್ಯಂತ ಸಂಭ್ರಮ ಹಾಗೂ ಖುಷಿಯಿಂದ ಈ ತೀರ್ಥೋದ್ಭವವನ್ನು ಕಣ್ತುಂಬಿಕೊಂಡಿದ್ದೇನೆ. ನಾಡಿನ ಸಮಸ್ತ ಜನತೆಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಒಳಿತ ಮಾಡುವಂತೆ ಪ್ರಾರ್ಥಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪುಷ್ಪಾಲಂಕಾರದಿಂದ ಕಾವೇರಿ ಕ್ಷೇತ್ರವನ್ನು ಕಂಗೊಳಿಸುವಂತೆ ಅಲಂಕರಿಸಲಾಗಿದೆ. ದೇವಾಲಯದ ಅನ್ನ ಪ್ರಸಾದ ಸಭಾಭವನದಲ್ಲಿ ಉಪಹಾರವನ್ನು ಆಯೋಜಿಸಲಾಗಿತ್ತು.

ಕಾವೇರಿ ತೀರ್ಥೋಧ್ಭವ ಸಂಧರ್ಭದಲ್ಲಿ ಶಾಸಕರಾದ ಎ ಎಸ್‌ ಪೊನ್ನಣ್ಣ, ಡಾ ಮಂತರ್‌ ಗೌಡ, ಸುಜಾಕುಶಾಲಪ್ಪ, ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್‌ ರಾಜಾ, ಪೊಲೀಸ್‌ ವರಿಷ್ಠಾಧಿಕಾರಿಗಳಾದ ಕೆ ರಾಮರಾಜನ್‌ ಉಪಸ್ಥಿತರಿದ್ದರು.
ಸಾಂಪ್ರದಾಯಿದ ಧಿರಿಸಿಸಿನಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

44 seconds ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

59 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

1 hour ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

3 hours ago