ಕೊಡಗು

ಕೊಡಗು: ಎರಡನೇ ವಾರಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ವಿದ್ಯಾರ್ಥಿಗಳ ಬೆಂಬಲ!

ಮಡಿಕೇರಿ: ವೇತನ ನೀಡುವಂತೆ ಒತ್ತಾಯಿಸಿ ನಗರದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇವರಿಗೆ ಅಲ್ಲಿನ ಕಾಲೇಜು ವಿದ್ಯಾರ್ಥಿಗಳೇ ಬೆಂಬಲ ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ತ್ಯಜಿಸಿ, ತಮ್ಮ ಅತಿಥಿ ಉಪನ್ಯಾಸಕರ ಜೊತೆಯಲ್ಲಿ ಕೈಜೋಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಮಂಗಳೂರು ವಿವಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನಲ್ಲಿ 43ಜನ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಿಲ್ಲ. ಹಾಗಾಗಿ ಡಿಸೆಂಬರ್ 29ರಿಂದ ಅತಿಥಿ ಅಧ್ಯಾಪಕರು ಪ್ರತಿಭಟನೆ ಪ್ರಾರಂಭಿಸಿದ್ದರು. ಮೂರು ದಿನಗಳ ನಂತರ ಅಕ್ಟೋಬರ್‌ ಸಂಬಳ ನೀಡಿದ್ದರಿಂದ ತಾತ್ಕಾಲಿಕ ಪ್ರತಿಭಟನಯೆನ್ನು ಕೈಬಿಡಲಾಗಿತು.

ಕೋವಿಡ್ ಅವಧಿಯಲ್ಲಿ ನಮ್ಮ ಮೂರು ತಿಂಗಳ ಸಂಬಳ ಬಾಕಿಯಿದೆ. ಹಾಗಿದ್ದರೂ ಡಿಸೆಂಬರ್‌ನಿಂದ ನಮಗೆ ಇನ್ನೂ ಸಂಬಳ ಬಂದಿಲ್ಲ ಎಂದು ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಫೆಬ್ರವರಿವರೆಗಿನ ವೇತನ ಜಮಾ ಮಾಡುವವರೆಗೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

7 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

7 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

7 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

7 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

8 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

8 hours ago