ಕೊಡಗು

ಕಟ್ಟೆಮಾಡು | ಅರ್ಚಕರ ಮೇಲೆ ಹಲ್ಲೆ ; ಬ್ರಾಹ್ಮಣ ಸಮಾಜ ಖಂಡನೆ

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ.

ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಚ೯ಕ ವಿಘ್ನೇಶ್ ಭಟ್ ಅವರಿಗೆ ಸಾಂತ್ವಾನ ಹೇಳಿ ಅವರ ಕುಟುಂಬಸ್ಥರಿಗೂ ಧೈಯ೯ ತುಂಬಿದರು.

ಘಟನೆಗೆ ಕಾರಣರಾದವರ ವಿರುದ್ದ ತಡ ಮಾಡದೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಬ್ರಾಹ್ಮಣ ಸಮಾಜದ ಪ್ರಮುಖರು ಒತ್ತಾಯ ಮಾಡಿದ್ದಾರೆ.

ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾಯ೯ದಶಿ೯ ಜಗದೀಶ್ ಸೋಮಯಾಜಿ, ಪ್ರಮುಖರಾದ ಬಿ.ಜಿ. ಅನಂತಶಯನ, ಜಿ.ಆರ್. ರವಿಶಂಕರ್, ಅರುಣ್ ಸೋಮಯಾಜಿ , ,ವಕೀಲ ಎಂ.ಎನ್ ಶಶಿಕಾಂತ್ ಹಾಜರಿದ್ದರು.

ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಖಂಡನೆ

ಮೂರ್ನಾಡುವಿನಲ್ಲಿ ಇಂದು ನಡೆದ ಅರ್ಚಕರಾದ ವಿಗ್ನೇಶ್ ಭಟ್ ರವರ ಮೇಲಿನ ಹಲ್ಲೆಯನ್ನು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘವು ತೀವ್ರವಾಗಿ ಖಂಡಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ತೇಜೋವಧೆ ಮಾಡಲು ಶ್ರಮಿಸುತ್ತಿದ್ದಾರೆ. ಬ್ರಾಹ್ಮಣರ ಮೇಲಿನ ಈ ರೀತಿಯ ಹಲ್ಲೆ ವಿಷಾದನೀಯ. ಅವರ ಕುಟುಂಬಕ್ಕೆ ಧೈರ್ಯ ತುಂಬುತ್ತಾ ತಪ್ಪಿತಸ್ಥರನ್ನು ಹುಡುಕಿ ಅವರಿಗೆ ಸೂಕ್ತವಾದ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯವರಲ್ಲಿ ಮನವಿ ಮಾಡುತ್ತೇವೆ ಎಂದು  ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಹಲ್ಲೆ ಖಂಡಿಸಿ ಹೇಳಿಕೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

9 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago