ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾನೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸೇತುವೆಯ ಬಳಿ ಅರುಣ್‌ಗೆ ಸೇರಿದ ಗುರುತಿನ ಚೀಟಿ ಹಾಗೂ ದಾಖಲೆ ಪತ್ತೆಯಾಗಿದ್ದು, ಕಾವೇರಿ ನದಿಯಲ್ಲಿ ಕೊಚ್ಚಿಹೋದ ಅರುಣ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕುಶಾಲನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ನುರಿತ ಈಜು ತಜ್ಞರಿಂದ ಶೋಧ ಕಾರ್ಯ ಮುಂದುವರಿದಿದೆ.