ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ.
ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡವ ದಿರಿಸಿನಲ್ಲಿಯೇ ಕಾಶಿ ವಿಶ್ವನಾಥನಿಗೆ ಅಭಿಷೇಕವಾಗಿರುವುದು ಹೆಮ್ಮೆ ಸಂಗತಿಯಾಗಿದೆ. ಈ ಮೂಲಕ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿ ಕುಟ್ಟೀರ ಸುಬ್ರಮಣಿ ಮಾದಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಮತ್ತು ಸಂಸಾರ ಇಂದು ಅಯೋಧ್ಯೆಗೂ ತಲುಪಿ ಅಲ್ಲಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸಲಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಬಾಲರಾಮನಿಗೆ ಕಾವೇರಿ ತೀರ್ಥದ ಅಭಿಷೇಕ ಮಾಡಲಿದ್ದು, ಕೊಡವ ಜನಾಂಗದವರು ಇದನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…