Mysore
26
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಜಲ ರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ ಮಾತೆ

ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ.

ಈ ಸಂದರ್ಭದಲ್ಲಿ ಜೀವನದಿ ಕಾವೇರಿ ಜಲರೂಪಣಿಯಾಗಿ ಸಾವಿರಾರು ಸಾರ್ವಜನಿಕರಿಗೆ ದರ್ಶನ ನೀಡಿದ್ದಾಳೆ.

ತೀರ್ಥೋದ್ಭವಕ್ಕೆ 50 ಸಾವಿರಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ಜನರ ನಿಯಂತ್ರಣಕ್ಕೆ ಹೆಚ್ಚುವರಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಆಯಾಯ ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅವವಡಿಸಲಾಗಿದ್ದು, ತಲಕಾವೇರಿಯ ಪ್ರಧಾನ ಅರ್ಚಕ ಪ್ರಶಾಂತ್‌ ಆಚಾರ್‌ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.

 

Tags:
error: Content is protected !!