ಕೊಡಗು

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಕೊಡಗಿನಲ್ಲಿ ಫುಲ್‌ ಟೆನ್ಷನ್‌.. ಟೆನ್ಷನ್.!

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ.

ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. ರೋಗವು ಹರಡುವ ಕಾರಣದಿಂದಾಗಿ ಜಮೀನೊಂದರಲ್ಲಿ 310 ಹಂದಿಗಳನ್ನು ಕೊಲ್ಲಲಾಗಿದೆ.

ನೆರೆ ರಾಜ್ಯದಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗ ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿಯೂ ಆತಂಕ ಸೃಷ್ಟಿಯಾಗಿದೆ.

ಕೊಡಗು ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಯಾಗಿರುವುದರಿಂದ ಕೇರಳದಲ್ಲಿ ಯಾವುದೇ ಸಾಂಕ್ರಾಮಿಕಗಳು ಹರಡಿದರೆ, ಜಿಲ್ಲೆಯಲ್ಲಿ ತಲೆನೋವು ಆರಂಭವಾಗುತ್ತದೆ. ಕೋವಿಡ್‌ ಸೋಂಕು ಸೇರಿದಂತೆ ಪ್ರಾಣಿಗಳಲ್ಲಿ ಕಂಡು ಬರುವ ಹಲವು ಖಾಯಿಲೆಗಳು ಕೇರಳದಿಂದಲೇ ಕೊಡಗಿಗೆ ಕಾಲಿಟ್ಟಿವೆ. ಹೀಗಾಗಿ ಕೇರಳದ ಯಾವುದೇ ಜಿಲ್ಲೆಯಲ್ಲಿ ರೋಗ ಕಂಡು ಬಂದರೂ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಸದ್ಯ ಕೇರಳದ ತ್ರಿಶೂರು ಜಿಲ್ಲೆಯಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಫಾರ್ಮ್‌ನಿಂದ 1 ಕಿ.ಮೀ ವ್ಯಾಪ್ತಿಯ ಎಲ್ಲಾ ಫಾರ್ಮ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಇದಲ್ಲದೇ 10 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ವ್ಯಾಪ್ತಿಯಿಂದ ಹಂದಿಗಳು ಮತ್ತು ಹಂದಿ ಮಾಂಸದ ಸಾಗಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡು ಪಕ್ಕದ ಕಣ್ಣೂರು ಜಿಲ್ಲೆಯವರೆಗೂ ವ್ಯಾಪಿಸಿತ್ತು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಿದ್ದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಹಂದಿ ಸಾಕಣೆದಾರರಿಗೆ ಜಾಗೃತಿ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಲಾಖೆ ಹಮ್ಮಿಕೊಂಡಿದ್ದು, ಇದೀಗ ಕೇರಳದಲ್ಲಿ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಆದೇಶ ಬಂದರೆ ತಕ್ಷಣ ಲಸಿಕೆ ನೀಡಲು ಮುಂದಾಗುವ ಸಾಧ್ಯತೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

15 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

29 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

4 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

4 hours ago