ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. ಸಣ್ಣ ಕಬ್ಬಿಣದ ಸಲಾಕೆಯಿಂದ ಎಟಿಎಂ ಯಂತ್ರದ ಮೇಲಿನ ಕವಚವನ್ನು ಮೀಟಿ ಕಳಚಿದ್ದು, ಮತ್ತೊಂದು ಪದರವನ್ನು ತೆರೆಯುವಷ್ಟರಲ್ಲಿ ಯಾರೋ ಬಂದಂತೆ ಭಾಸವಾದ ಹಿನ್ನೆಲೆಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳ್ಳರು ಎಟಿಎಂ ಒಡೆಯಲು ಯತ್ನಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯಾವಳಿಗಳನ್ನು ಆಧರಿಸಿ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…