ಕೊಡಗು

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ ನಾಪತ್ತೆಯಾಗಿದ್ದಾರೆ.

ಯವಕಪಾಡಿ ಗ್ರಾಮದ ಖಾಸಗಿ ಹೋಮ್‌ಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿ ಒಬ್ಬರೇ ತಾಡಿಯಂಡಮೋಳ್ ಶಿಖರಕ್ಕೆ ಟ್ರೆಕ್ಕಿಂಗ್‌ಗೆ ಹೊರಟಿದ್ದರು. ಪ್ರದೇಶದಲ್ಲಿ ಕಾಡಾನೆ ಮತ್ತು ಹಾವುಗಳ ಅಪಾಯವಿರುವುದರಿಂದ ಇತರ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿತ್ತು.

ಇತರ ಪ್ರವಾಸಿಗರು ಬೆಟ್ಟದಿಂದ ವಾಪಸಾಗಿ ಬಂದರೂ ಶರಣ್ಯ ಅವರು ಹಿಂದಿರುಗಲಿಲ್ಲ. ಇದು ಗಮನಕ್ಕೆ ಬಂದ ಕೂಡಲೇ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆ ಸಿಬ್ಬಂದಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು.

ಕುಡಿಯಾರ ಮುತ್ತಪ್ಪ ಎಂಬ ಸ್ಥಳೀಯರು ಪೊಲೀಸರಿಗೆ ತಿಳಿಸಿದ ನಂತರ ಪೊಲೀಸ್ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಬೆಟ್ಟದ ಪ್ರದೇಶದಲ್ಲಿ ವ್ಯಾಪಕ ಹುಡುಕಾಟ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ಸುಳಿವು ದೊರೆತಿಲ್ಲ.

ಶರಣ್ಯ ಅವರ ಮೊಬೈಲ್ ಫೋನ್ ಕೇರಳ ನೆಟ್‌ವರ್ಕ್‌ನಲ್ಲಿ ಸಿಗುತ್ತಿದೆ ಎಂದು ತಿಳಿದುಬಂದಿದೆ. ಹುಡುಕಾಟವು ಇಂದು ಸಹ ಮುಂದುವರೆದಿದೆ.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

35 mins ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

1 hour ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

2 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

3 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

4 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

4 hours ago