ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ ನಾಪತ್ತೆಯಾಗಿದ್ದಾರೆ.
ಯವಕಪಾಡಿ ಗ್ರಾಮದ ಖಾಸಗಿ ಹೋಮ್‌ಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿ ಒಬ್ಬರೇ ತಾಡಿಯಂಡಮೋಳ್ ಶಿಖರಕ್ಕೆ ಟ್ರೆಕ್ಕಿಂಗ್‌ಗೆ ಹೊರಟಿದ್ದರು. ಪ್ರದೇಶದಲ್ಲಿ ಕಾಡಾನೆ ಮತ್ತು ಹಾವುಗಳ ಅಪಾಯವಿರುವುದರಿಂದ ಇತರ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿತ್ತು.
ಇತರ ಪ್ರವಾಸಿಗರು ಬೆಟ್ಟದಿಂದ ವಾಪಸಾಗಿ ಬಂದರೂ ಶರಣ್ಯ ಅವರು ಹಿಂದಿರುಗಲಿಲ್ಲ. ಇದು ಗಮನಕ್ಕೆ ಬಂದ ಕೂಡಲೇ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆ ಸಿಬ್ಬಂದಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು.
ಕುಡಿಯಾರ ಮುತ್ತಪ್ಪ ಎಂಬ ಸ್ಥಳೀಯರು ಪೊಲೀಸರಿಗೆ ತಿಳಿಸಿದ ನಂತರ ಪೊಲೀಸ್ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಬೆಟ್ಟದ ಪ್ರದೇಶದಲ್ಲಿ ವ್ಯಾಪಕ ಹುಡುಕಾಟ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ಸುಳಿವು ದೊರೆತಿಲ್ಲ.
ಶರಣ್ಯ ಅವರ ಮೊಬೈಲ್ ಫೋನ್ ಕೇರಳ ನೆಟ್‌ವರ್ಕ್‌ನಲ್ಲಿ ಸಿಗುತ್ತಿದೆ ಎಂದು ತಿಳಿದುಬಂದಿದೆ. ಹುಡುಕಾಟವು ಇಂದು ಸಹ ಮುಂದುವರೆದಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…