Mysore
22
overcast clouds

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ.

ಕನ್ನಿಕಂಡ ಸುಬ್ಬಯ್ಯ (76) ಎಂಬವರು ತಮ್ಮ ಪತ್ನಿ ಭೋಜಮ್ಮ (74) ಅವರಿಗೆ ಕೋವಿಯಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಅದೇ ಒಂಟಿ ನಳಿಕೆಯ ಬಂದೂಕಿನಿಂದ ತಮಗೂ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:
error: Content is protected !!