ಕೊಡಗು

ಕೊಡಗು | ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕೊಡಗು : ಜಿಲ್ಲೆಯಲ್ಲಿ ಕಾಡಾನೆ ದಾಳಿ ಮತ್ತೊಂದು ಜೀವ ಬಲಿಯಾಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಅವರು ಕಾಡಾನೆ ದಾಳಿಯಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ತಿತಿಮತಿ ಸಮೀಪದ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸಲು ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಸಂಧ್ಯಾ ಅವರು ತೆರಳಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಸಂಧ್ಯಾ ಅವರೊಂದಿಗೆ ಇದ್ದ ಇಬ್ಬರು ಕಾರ್ಮಿಕರು ಆನೆಯನ್ನು ಕಂಡ ತಕ್ಷಣ ಸ್ಥಳದಿಂದ ಓಡಿ ಹೋಗಿ ಪ್ರಾಣಾಪಾಯದಿಂದಪಾರಾಗಿದ್ದಾರೆ.

ಆದರೆ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಗೋಣಿಕೊಪ್ಪಲಿನ ಲೋಪಾಮುದ್ರಾ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸಿಎಫ್ ಲಕ್ಷ್ಮಿಕಾಂತ್, ಆರ್‌ಎಫ್‌ಓ ದೇವರಾಜ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಹಾಜರಾಗಿದ್ದರು. ಕಾಡಾನೆ ದಾಳಿಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಕಾಡಾನೆ ಹಾವಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಘಟನೆಯ ಕುರಿತು ತಿತಿಮತಿ ಅರಣ್ಯ ವಲಯದ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

23 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago