Rain Intensifies; Red Alert Issued
ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ನಿಗಧಿತ ಕ ೧೮.೫೦೦ ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಣೆ ಮಾಡುವ ವಾಹನಗಳು,ಬುಲೆಟ್ ಟ್ಯಾಂಕರ‍್ಸ್, ಶಿಪ್ ಕಾರ್ಗೋ ಕಂಟೈನರ‍್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರ‍್ಟಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೆಲವು ವಾಹನಗಳಿಗೆ ವಿನಾಯಿತಿ:
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು, ಮಲ್ಟಿ ಆಕ್ಸಿಲ್ ಬಸ್‌ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಕುಶಾಲನಗರ ಮತ್ತು ಸಂಪಾಜೆಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ, ಸಿಬ್ಬಂದಿ ನಿಯೋಜಿಸಬೇಕು, ಮೊಬೈಲ್ ಪಟ್ರೋಲಿಂಗ್ ನಡೆಸಬೇಕು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…