ಕೊಡಗು

ಕೊಡಗು | ಭಾರೀ ವಾಹನಗಳ ಸಂಚಾರ ನಿಷೇಧ

ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ನಿಗಧಿತ ಕ ೧೮.೫೦೦ ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಣೆ ಮಾಡುವ ವಾಹನಗಳು,ಬುಲೆಟ್ ಟ್ಯಾಂಕರ‍್ಸ್, ಶಿಪ್ ಕಾರ್ಗೋ ಕಂಟೈನರ‍್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರ‍್ಟಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಕೆಲವು ವಾಹನಗಳಿಗೆ ವಿನಾಯಿತಿ:
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು, ಮಲ್ಟಿ ಆಕ್ಸಿಲ್ ಬಸ್‌ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಕುಶಾಲನಗರ ಮತ್ತು ಸಂಪಾಜೆಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ, ಸಿಬ್ಬಂದಿ ನಿಯೋಜಿಸಬೇಕು, ಮೊಬೈಲ್ ಪಟ್ರೋಲಿಂಗ್ ನಡೆಸಬೇಕು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago