ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ (೨೭) ಬಂಧಿತ ಆರೋಪಿ. ಆರೋಪಿಯಿಂದ ೫,೦೯,೦೦೦ ರೂ. ನಗದು, ೧೩೭ ಗ್ರಾಂ ಚಿನ್ನಾಭಾರಣಗಳು ಹಾಗೂ ೧ ಮೊಬೈಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆಯ ನಿವಾಸಿ ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು, ಇವರನ್ನು ನೋಡಿಕೊಳ್ಳುವ ಸಲುವಾಗಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕಾಗಿ ಕೊಪ್ಪಳ ಜಿಲ್ಲೆ ಮೂಲದವನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ನೇಮಕಗೊಂಡಿದ್ದ. ಈತ ಇದೇ ಫೆ.೨೮ ರಂದು ಮನೆಯಲ್ಲಿಟ್ಟಿದ್ದ ಅಂದಾಜು ೮೦ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ರೂ.೫,೫೦,೦೦೦ ನಗದನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಿರಿಯ ಅಧಿಕಾರಿಗಳು ಹಾಗೂ ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಅಪರಾಧ ಕೃತ್ಯ ಪರಿಶೀಲನಾ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಂಡಿದ್ದರು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿದಾಗ ಆರೋಪಿ ಭದ್ರಪ್ಪ ಬಸಪ್ಪ ಹಡಪದ ಎಂದು ತಿಳಿದು ಬಂತು.
ಈತ ಮಹಾಂತೇಶ ಪೂಜಾರ ಎಂಬುವವರ ಆಧಾರ್ ಕಾರ್ಡ್ ಪ್ರತಿಯನ್ನು ಬಳಸಿ ಹೋಂ ನಸಿರ್ಂಗ್ ಕೆಲಸಕ್ಕೆ ಸೇರಿರುವುದು ಹಾಗೂ ೨೦೨೫ ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಕೆ.ಟಿ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ.
ಡಿವೈಎಸ್‌ಪಿ ಪಿ.ಎ. ಸೂರಜ್, ಮಡಿಕೇರಿ ನಗರ ವೃತ್ತದ ಸಿಪಿಐ ಪಿ.ಕೆ. ರಾಜು, ಬೆರಳು ಮುದ್ರೆ ಘಟಕದ ಪಿಐ ರಾಮಕೃಷ್ಣ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎಸ್. ಅನ್ನಪೂರ್ಣ, ಎಎಸ್‌ಐ ರಾಮಪ್ಪ, ಸಿಬ್ಬಂದಿಗಳಾದ ಪ್ರಭಾಕರ್, ಗಿರೀಶ್, ಕಿರಣ್, ಕೃಷ್ಣಮೂರ್ತಿ, ಸುಧೀರ್, ಮುನೀರ್, ರಂಜಿತ್, ಪ್ರದೀಪ್, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ರಾಜೇಶ್, ಶರತ್ ರೈ, ಫಾರೆನ್ಸಿಕ್ ವಿಭಾಗದ ಜಯಕುಮಾರ್, ಸಂತೋಷ, ಡಿಸಿಆರ್‌ಬಿ ವಿಭಾಗದ ಪ್ರವೀಣ್ ಹಾಗೂ ನಿರಂಜನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…