ಕೊಡಗು

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಮಣ್ಣೂರು ಗ್ರಾಮದ ಭದ್ರಪ್ಪ ಬಸಪ್ಪ ಹಡಪದ (೨೭) ಬಂಧಿತ ಆರೋಪಿ. ಆರೋಪಿಯಿಂದ ೫,೦೯,೦೦೦ ರೂ. ನಗದು, ೧೩೭ ಗ್ರಾಂ ಚಿನ್ನಾಭಾರಣಗಳು ಹಾಗೂ ೧ ಮೊಬೈಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆಯ ನಿವಾಸಿ ಪಾರ್ಥಸಾರಥಿ ಎಂಬುವವರ ಅಣ್ಣ ವಯೋವೃದ್ಧರಾಗಿದ್ದು, ಇವರನ್ನು ನೋಡಿಕೊಳ್ಳುವ ಸಲುವಾಗಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕಾಗಿ ಕೊಪ್ಪಳ ಜಿಲ್ಲೆ ಮೂಲದವನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ನೇಮಕಗೊಂಡಿದ್ದ. ಈತ ಇದೇ ಫೆ.೨೮ ರಂದು ಮನೆಯಲ್ಲಿಟ್ಟಿದ್ದ ಅಂದಾಜು ೮೦ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ರೂ.೫,೫೦,೦೦೦ ನಗದನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿರಿಯ ಅಧಿಕಾರಿಗಳು ಹಾಗೂ ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಅಪರಾಧ ಕೃತ್ಯ ಪರಿಶೀಲನಾ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಂಡಿದ್ದರು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿದಾಗ ಆರೋಪಿ ಭದ್ರಪ್ಪ ಬಸಪ್ಪ ಹಡಪದ ಎಂದು ತಿಳಿದು ಬಂತು.

ಈತ ಮಹಾಂತೇಶ ಪೂಜಾರ ಎಂಬುವವರ ಆಧಾರ್ ಕಾರ್ಡ್ ಪ್ರತಿಯನ್ನು ಬಳಸಿ ಹೋಂ ನಸಿರ್ಂಗ್ ಕೆಲಸಕ್ಕೆ ಸೇರಿರುವುದು ಹಾಗೂ ೨೦೨೫ ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಕೆ.ಟಿ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ.

ಡಿವೈಎಸ್‌ಪಿ ಪಿ.ಎ. ಸೂರಜ್, ಮಡಿಕೇರಿ ನಗರ ವೃತ್ತದ ಸಿಪಿಐ ಪಿ.ಕೆ. ರಾಜು, ಬೆರಳು ಮುದ್ರೆ ಘಟಕದ ಪಿಐ ರಾಮಕೃಷ್ಣ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಎಸ್. ಅನ್ನಪೂರ್ಣ, ಎಎಸ್‌ಐ ರಾಮಪ್ಪ, ಸಿಬ್ಬಂದಿಗಳಾದ ಪ್ರಭಾಕರ್, ಗಿರೀಶ್, ಕಿರಣ್, ಕೃಷ್ಣಮೂರ್ತಿ, ಸುಧೀರ್, ಮುನೀರ್, ರಂಜಿತ್, ಪ್ರದೀಪ್, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ರಾಜೇಶ್, ಶರತ್ ರೈ, ಫಾರೆನ್ಸಿಕ್ ವಿಭಾಗದ ಜಯಕುಮಾರ್, ಸಂತೋಷ, ಡಿಸಿಆರ್‌ಬಿ ವಿಭಾಗದ ಪ್ರವೀಣ್ ಹಾಗೂ ನಿರಂಜನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago