ಕೊಡಗು

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಿ: ಡಿಸಿ ವೆಂಕಟ್ ರಾಜಾ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸೋಮವಾರ (ಆ.05) ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ. ನಿಂದ ಹಣ ಬಿಡುಗಡೆ ಮಾಡಲಾಗುವುದು. ಸರಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ. ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು

ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿರ್ದೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

8 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

9 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

10 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

10 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

12 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

12 hours ago