ಕೊಡಗು

ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭ: ಎಂ.ಎನ್.ರವೂಫ್

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.

 

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದೆ.

ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ, ಕುಶಾಲನಗರ ಆಸ್ಪತ್ರೆಯ ಅಭಿವೃದ್ಧಿ, ಮಡಿಕೇರಿ- ದೋಣಿಗಲ್ ನಡುವೆ ಅಂತರಾಷ್ಟಿಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು, ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಮೀಸಲಿಟ್ಟಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಣ ಘೋಷಿಸಿರುವುದರಿಂದ ಕೊಡಗು ಜಿಲ್ಲೆಯ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆತಂತ್ತಾಗಿದೆ.

ಈ ಹಿಂದಿನ ಎಲ್ಲಾ ಬಜೆಟ್ ಗಳಿಗಿಂತ ಪ್ರಸ್ತುತ ವರ್ಷ ಮಂಡಿಸಿರುವ ಬಜೆಟ್ ವಿಭಿನ್ನವಾಗಿದ್ದು, ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಜಿಲ್ಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಲಾಭ ದೊರೆಯಲು ಶಾಸಕದ್ವಯರ ನಿರಂತರ ಪ್ರಯತ್ನದ ಫಲವೇ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago