ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





