ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು.
ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, ಹಮ್ಮಿಯಾಲ, ಮಕ್ಕಂದೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಹೀಗಾಗಿಯೇ ಆ ಹೂಳನ್ನು ತೆಗೆಯುವುದಕ್ಕಾಗಿ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ 131 ಕೋಟಿ ಹಣವನ್ನು ಬಜೆಟ್‌ನಲ್ಲಿಯೇ ಘೋಷಿಸಿತ್ತು. ಆದರೆ ಇಂದಿಗೂ ಹೂಳು ತೆಗೆಯಲು ಸಾಧ್ಯವೇ ಆಗಿಲ್ಲ.
ಆದರೆ ಈಗ ಹೂಳು ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಬರುವ ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಕಾರಣವಾಗುತ್ತಾ ಎನ್ನುವ ಆತಂಕ ಶುರುವಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಮಳೆ ಸುರಿಯುತ್ತಿದೆ. ಜಲಾಶಯಕ್ಕೆ ಮೂರು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಬಹುತೇಕ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಆದರೆ ನಿಜವಾಗಿಯೂ ಹೇಳಬೇಕೆಂದರೆ 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಬರೋಬ್ಬರಿ 1.5 ಟಿಎಂಸಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಅಂದರೆ ಜಲಾಶಯದಲ್ಲಿ ಇನ್ನು ಕೇವಲ 7 ಟಿಎಂಸಿ ನೀರು ಮಾತ್ರವೇ ಭರ್ತಿಯಾಗಲು ಅವಕಾಶವಿದೆ.
ಅಂದರೆ ಸಾಕಷ್ಟು ಮಳೆ ಬಂದಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದರೆ ಆ ನೀರನ್ನು ಜಲಾಶಯದಲ್ಲಿ ನಿಲ್ಲಿಸುವ ಬದಲು ಹಾಗೆಯೇ ನದಿಗೆ ಹರಿಸಬೇಕು. ಇಲ್ಲದಿದ್ದರೆ ಹಾರಂಗಿ ಜಲಾನಯನ ಪ್ರದೇಶದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿ ಭೂಕುಸಿತವಾಗುವ ಆತಂಕವಿದೆ.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…