ಕೊಡಗು

ಮತ್ತೆ ಭೂಕುಸಿತಕ್ಕೆ ಕಾರಣವಾಗುತ್ತಾ ಹಾರಂಗಿ ಜಲಾಶಯದ ಹೂಳು.?

ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು.

ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, ಹಮ್ಮಿಯಾಲ, ಮಕ್ಕಂದೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಹೀಗಾಗಿಯೇ ಆ ಹೂಳನ್ನು ತೆಗೆಯುವುದಕ್ಕಾಗಿ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ 131 ಕೋಟಿ ಹಣವನ್ನು ಬಜೆಟ್‌ನಲ್ಲಿಯೇ ಘೋಷಿಸಿತ್ತು. ಆದರೆ ಇಂದಿಗೂ ಹೂಳು ತೆಗೆಯಲು ಸಾಧ್ಯವೇ ಆಗಿಲ್ಲ.

ಆದರೆ ಈಗ ಹೂಳು ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಬರುವ ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಕಾರಣವಾಗುತ್ತಾ ಎನ್ನುವ ಆತಂಕ ಶುರುವಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಮಳೆ ಸುರಿಯುತ್ತಿದೆ. ಜಲಾಶಯಕ್ಕೆ ಮೂರು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಬಹುತೇಕ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಆದರೆ ನಿಜವಾಗಿಯೂ ಹೇಳಬೇಕೆಂದರೆ 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಬರೋಬ್ಬರಿ 1.5 ಟಿಎಂಸಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಅಂದರೆ ಜಲಾಶಯದಲ್ಲಿ ಇನ್ನು ಕೇವಲ 7 ಟಿಎಂಸಿ ನೀರು ಮಾತ್ರವೇ ಭರ್ತಿಯಾಗಲು ಅವಕಾಶವಿದೆ.

ಅಂದರೆ ಸಾಕಷ್ಟು ಮಳೆ ಬಂದಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದರೆ ಆ ನೀರನ್ನು ಜಲಾಶಯದಲ್ಲಿ ನಿಲ್ಲಿಸುವ ಬದಲು ಹಾಗೆಯೇ ನದಿಗೆ ಹರಿಸಬೇಕು. ಇಲ್ಲದಿದ್ದರೆ ಹಾರಂಗಿ ಜಲಾನಯನ ಪ್ರದೇಶದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿ ಭೂಕುಸಿತವಾಗುವ ಆತಂಕವಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago