ಕೊಡಗು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ.
ಪೆರಾಜೆಯ ಕಾರ್ತಿಕ್ ಭಟ್ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕಾರ್ತಿಕ್ ಭಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





