ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.
ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಮರವೊಂದು ಬುಡಸಮೇತ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಎಂದಿನಂತೆ ಪ್ರಾರಂಭವಾಯಿತು.ಇನ್ನು ಮಳೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದ್ದು, ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ.





