Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕೊಡಗಿನಲ್ಲಿ ಮಳೆಯ ಅಬ್ಬರ: ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

kodagu

ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್‌ ಗಾತ್ರದ ಮರಗಳು ಧರೆಗುರುಳಿವೆ.

ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್‌ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಮರವೊಂದು ಬುಡಸಮೇತ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಎಂದಿನಂತೆ ಪ್ರಾರಂಭವಾಯಿತು.ಇನ್ನು ಮಳೆ ಬಿಟ್ಟು ಬಿಟ್ಟು ಸುರಿಯುತ್ತಿರುವ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದ್ದು, ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ.

Tags:
error: Content is protected !!