ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಅಲ್ಲಲ್ಲಿ ಸೇತುವೆಗಳು ಜಲಾವೃತವಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.





