ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು ಹಿಂಡು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ.
ಇದನ್ನು ಓದಿ: ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ
ಮಕ್ಕಳು ಹಾಗೂ ಶಾಲಾ ಶಿಕ್ಷಕರ ಮೇಲೆ ದಾಳಿಯಾಗಿದ್ದು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಜೇನು ಹುಳುಗಳನ್ನು ಓಡಿಸಿ ಮಕ್ಕಳನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಹಿತಿ ಪ್ರಕಾರ ಮಕ್ಕಳಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ. ವಿಷಯ ತಿಳಿದು ವಿರಾಜಪೇಟೆ ನಗರ ಠಾಣೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.





