ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಎನ್‌ಡಿಆರ್‌ಎಫ್ ತಂಡವು ಜಿಲ್ಲೆಗೆ ಆಗಮಿಸಿದೆ.
೨೦೧೮ರ ಪ್ರಕೃತಿ ವಿಕೋಪ ಬಳಿಕ ಪ್ರತಿವರ್ಷ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮಿಸುತ್ತದೆ. ಈ ಹಿನ್ನಲೆ, ಈ ಬಾರಿಯೂ ಮುಂಜಾಗೃತಾ ಕ್ರಮವಾಗಿ ಎನ್‌ಡಿಆರ್‌ಎಫ್ ಆಗಮಿಸಿ ಅಗತ್ಯ ತಯಾರಿಯಲ್ಲಿ ತೊಡಗಿಸಿಕೊಂಡಿದೆ.





