ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ.
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ.
ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 15 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…