ಕೊಡಗು

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.

ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಬ್ರಿಜೇಶ್‌ಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಇಂದು ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಮಾಹಿತಿ ಪ್ರಕಾರ ಅಪ್ಪಚ್ಚು ಪುತ್ರ ಅಮೃತ್‌ ಎಂಬಾತ ಕೂಡ ಬಿಜ್ರೇಶ್ ತಂದೆ ಮಾಚಿಮಂಡ ರತನ್‌ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

14 mins ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

41 mins ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

1 hour ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

1 hour ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

2 hours ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

2 hours ago