ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.
ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಬ್ರಿಜೇಶ್‌ಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ
ಇಂದು ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಮಾಹಿತಿ ಪ್ರಕಾರ ಅಪ್ಪಚ್ಚು ಪುತ್ರ ಅಮೃತ್ ಎಂಬಾತ ಕೂಡ ಬಿಜ್ರೇಶ್ ತಂದೆ ಮಾಚಿಮಂಡ ರತನ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…