ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ.
ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ 10,000 ದಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ನಿವಾಸಿಗಳು ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.
ಧಾರಾಕಾರ ಮಳೆಯಿಂದಾಗಿ ಬಾಡಗ ಬಾಣಂಗಾಲ ಗ್ರಾಮದ ಅಮೀನ ಕೆ.ಪಿ.(ಕುಂಞಿಮಹಮ್ಮದ್) ರವರ ವಾಸದ ಮನೆಯ ಮುಂಭಾಗದ ಗೋಡೆ ಮತ್ತು ಮೇಲ್ಚಾವಣಿಗೆ ತೀವ್ರ ಹಾನಿಯಾಗಿದೆ. ಪೊನ್ನಂಪೇಟೆ ಹೋಬಳಿ ಹುದೂರು ಗ್ರಾಮದ ನಿವಾಸಿಯಾದ ಹೆಚ್.ಕೆ. ರವಿ ಎಂಬವರ ವಾಸದ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗಾಳಿ ಮಳೆಗೆ ಗ್ರಾಮೀಣ ಭಾಗದಲ್ಲಿ ಮರಗಳು ಧರೆಗುರುಳಿವೆ. ಕೆಲೆವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯ ಚುರುಕುಗೊಂಡಿದೆ. ಮಂಗಳವಾರ ಜಿಲ್ಲೆಯಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದ್ದು, ನಂತರ ಮಳೆ ಕಡಿಮೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಸೋಮವಾರ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…