ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ.
ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.
ಕಾಡಿನಲ್ಲಿ ದಾರಿ ತಪ್ಪಿದ ಪರಿಣಾಮ ಹಾಗೂ ಮೊಬೈಲ್ ಬ್ಯಾಟರಿ ಚಾರ್ಜ್ ಇಲ್ಲದರಿಂದ, ಮೊಬೈಲ್ ಕಟ್ಟಾಗಿ ಸಂಪರ್ಕಕ್ಕೆ ಸಾಧ್ಯವಾಗಿಲ್ಲ ಈಕೆಯನ್ನು ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಎ ಎನ್ ಎಫ್ ತಂಡ, ಸ್ಥಳೀಯರು ತೀವ್ರ ಶೋಧ ನಡೆಸಿದ ಪರಿಣಾಮ ಇದೀಗ ಆಕೆ ಕಾಡಿನೊಳಗೆ ಪತ್ತೆಯಾಗಿದ್ದು ಆಕೆಯನ್ನು ಪೊಲೀಸರು ಕಾಡಿನಿಂದ ಕರೆದುಕೊಂಡು ಬರುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…