ಮಡಿಕೇರಿ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳ ಸಾವು ಹಾಗೂ ಬಂಡೀಪುರ ವಲಯದಲ್ಲಿ ಒಂದು ಹುಲಿ ಸಾವು ಮಾಸುವ ಮುನ್ನವೇ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ.
ಕೊಡಗಿನ ಪೊನ್ನಂಪೇಟೆ ತಾಲೂಕಿನ ವೆಷ್ಣಾಮಲೆ ಗ್ರಾಮದ ಕಾಫಿ ತೋಟ ಹುಲಿ ಮೃತದೇಹ ಪತ್ತೆಯಾಗಿದ್ದು, ಮೃತ ಹುಲಿಯು ವಯಸ್ಸಾಗಿ ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಗಾಗ್ಗೆ ಹುಲಿಗಳ ಸಾವುಗಳು ವನ್ಯಜೀವಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.




