ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ.
ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿಯ ಚಲನವಲನದ ಬಗ್ಗೆ ಕಾಫಿ ತೋಟದ ಕಾರ್ಮಿಕರು ಮಾಹಿತಿ ಹಂಚಿಕೊಂಡಿದ್ದರು. ಇದೀಗ ಚೆಟ್ಟಳ್ಳಿಯ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಹುಲಿಯ ಕೆಲವು ತುಣುಕುಗಳು ಹಾಗೂ ರಕ್ತದ ಮಾದರಿಯನ್ನು ಮರಣೋತ್ತರ ಪರೀಕ್ಷೆಗೆಂದು ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಹುಲಿಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.





