Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಕೊಡಗಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ: ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವು

ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.

ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಕಳೆದ 15 ದಿನಗಳಿಂದಲೂ ಪ್ರವಾಸಿಗರು ಕೊಡಗಿನತ್ತ ಮುಖ ಮಾಡದೇ ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋಗುತ್ತಿದ್ದರು.

ಆದರೆ ಈಗ ಕೊಡಗಿನಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿದ್ದು, ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.

ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿರುವ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳಿಗೂ ಭಾರೀ ಸಂತಸವಾಗಿದ್ದು, ಇದರ ಜೊತೆಗೆ ಟ್ಯಾಕ್ಸಿ, ಆಟೋ ಚಾಲಕರಿಗೆ ಭಾರೀ ಅನುಕೂಲವಾಗಿದೆ.

ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಈ ವಾರ ಕೊಡಗಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ರೆಸಾರ್ಟ್‌ಗಳಲ್ಲಿ ಮುಂಗಡ ಬುಕ್ಕಿಂಗ್‌ ಕೂಡ ಜಾಸ್ತಿಯಾಗಿದೆ.

Tags: