ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ಕಳೆದ 15 ದಿನಗಳಿಂದಲೂ ಪ್ರವಾಸಿಗರು ಕೊಡಗಿನತ್ತ ಮುಖ ಮಾಡದೇ ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋಗುತ್ತಿದ್ದರು.
ಆದರೆ ಈಗ ಕೊಡಗಿನಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿದ್ದು, ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿರುವ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳಿಗೂ ಭಾರೀ ಸಂತಸವಾಗಿದ್ದು, ಇದರ ಜೊತೆಗೆ ಟ್ಯಾಕ್ಸಿ, ಆಟೋ ಚಾಲಕರಿಗೆ ಭಾರೀ ಅನುಕೂಲವಾಗಿದೆ.
ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಈ ವಾರ ಕೊಡಗಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ರೆಸಾರ್ಟ್‌ಗಳಲ್ಲಿ ಮುಂಗಡ ಬುಕ್ಕಿಂಗ್ ಕೂಡ ಜಾಸ್ತಿಯಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…