Mysore
28
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕೊಡಗು ವಿವಿ ಮುಚ್ಚಲು ವಿರೋಧ: ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಹಾಗೂ ಮಡಿಕೇರಿ ಸರ್ಕಾರಿ ಪದವಿ ಕಾಲೇಜು, ಎಂ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಸಂಘಟನೆಯ ಪ್ರಮುಖರು, ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ವಹಿಸದೇ ಮತ್ತು ಇಚ್ಛಾಶಕ್ತಿಯನ್ನು ತೋರದೇ ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ಹೊಸ ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ಖಂಡಿಸುವುದಾಗಿ ಹೇಳಿದರು.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

Tags:
error: Content is protected !!