ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ ನಡೆದಿದ್ದು, ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ.
ಭಾನುವಾರ ರಾತ್ರಿ ಕಲ್ಚೆರ್ಪೆಯ ಪ್ರಜ್ವಲ್ ಎಂಬವರಿಗೆ ಸೇರಿದ ಬಾವಿಯೊಳಗೆ ಮರಿಯಾನೆ ಬಿದ್ದಿದೆ. ಆನೆಯ ನರಳಾಟ ಕೇಳಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿಯೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲಿಸಿದರು.
ಭಾನುವಾರ ಬೆಳಗ್ಗೆ 8 ಗಂಟೆಯಿಂದ ಜೆಸಿಬಿ ತಂದು ಒಂದು ಬದಿ ಅಗೆದು ಕಾಡಾನೆ ಮರಿ ತೆರಳಲು ರಸ್ತೆ ನಿರ್ಮಿಸಲಾಯಿತು. ಮಧ್ಯಾಹ್ನ 12.50ರವರೆಗೆ ಈ ಕಾರ್ಯಾಚರಣೆ ಮುಂದುವರೆಯಿತು. ಬಳಿಕ ದಾರಿ ಮೂಲಕ ಕಾಡಾನೆ ಬಾಯಿಂದ ಮೇಲಕ್ಕೆ ಬಂದಿತು. ಈ ವೇಳೆ ಜನ ವಸತಿ ಪ್ರದೇಶದತ್ತ ದೌಡಾಯಿಸಿದ ಆನೆ ಕೆಲಕಾಲ ಆತಂಕ ಸೃಷ್ಟಿಸಿತ್ತು. ಬಳಿಕ ಸುರಕ್ಷಿತವಾಗಿ ತೆರಳಿದೆ. ಆನೆ ಬಾವಿಗೆ ಬಿದ್ದ ಸುದ್ದಿ ತಿಳಿದು ಜನರು ಗುಂಪು ಗುಂಪಾಗಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ವೀಕ್ಷಿಸಿದರು.
ಅರಣ್ಯ ಇಲಾಖೆಯ ಸಿಸಿಎಫ್ ಕರಿಕಾಳನ್, ಡಿಎಫ್‌ಒ ಅಂಥೋನಿ ಎಸ್. ಮರಿಯಪ್ಪ, ಎಸಿಎಫ್‌ಗಳಾದ ಪ್ರಶಾಂತ್ ಪೈ, ಸುಬ್ಬಯ್ಯ ನಾಯ್ಕ್, ರೇಂಜರ್‌ಗಳಾದ ಕಿರಣ್ ಪುತ್ತೂರು, ವಿಮಲ್ ಬಾಬು ಹಾಗೂ ಸಿಬ್ಬಂದಿಗಳು ಇದ್ದರು. ಪೋಲೀಸ್ ಇಲಾಖೆ, ಅಗ್ನಿ ಶಾಮಕ ಇಲಾಖಾ ಸಿಬ್ಬಂದಿಗಳು ಅಗತ್ಯ ಮುನ್ನಚ್ಚರಿಕಾ ಕ್ರಮದ ಮೂಲಕ ಸಹಕಾರ ನೀಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…