Mysore
31
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ.

ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ ದಾಳಿಯಿಂದ ಗಾಯಗಳಾಗಿವೆ.

ಗಾಯಾಳುಗಳಿಗೆ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದೇ ಮಾರ್ಗದಲ್ಲಿ ಒಂದು ತಿಂಗಳ ಅಂತರದಲ್ಲಿ ಮತ್ತೊಮ್ಮೆ ಕಾಡಾನೆ ದಾಳಿ ನಡೆದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಸ್ತೆ ಬದಿಯ ಬೇಲಿಯನ್ನು ತೆರವುಗೊಳಿಸದಿರುವುದೇ ದಾಳಿಗೆ ಕಾರಣ ಎಂದು ಕಾರ್ಮಿಕ ಮುಖಂಡ ಭರತ್ ಆರೋಪಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!