ಕೊಡಗು: ಜಿಲ್ಲೆಯ ತಿತಿಮತಿ ಅರಣ್ಯ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಉಪಟಳ ನೀಡುತ್ತಿದ್ದ ಕಾಟಾನೆ ಸೆರೆಯ ಕಾರ್ಯಚರಣೆ ವೇಳೆ ಸೋಮವಾರ ಕಾಡಾನೆ ಗುಂಪೊಂದು ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಲು ಯತ್ನಿಸಿದೆ.
ಆನೆಯು ಕಾರ್ಯಚರಣೆಯಲ್ಲಿ ನಿರತರಾಗಿದ್ದ ಎಲ್ಲರನ್ನೂ ಅಟ್ಟಾಡಿಸಿದೆ. ಇದರಿಂದಾಗಿ ಸಿಬ್ಬಂದಿಗಳು ಕಾಫಿ ತೋಟದೊಳಗೆ ಓಡಿ ಜೀವ ಉಳಿಸಿಕೊಂಡಿದ್ದಾರೆ.





