ಮಡಿಕೇರಿ: ಕುವೈತ್ ದೇಶಕ್ಕೆ ಕೆಲಸಕ್ಕೆಂದು ತೆರಳಿ ಸಿಲುಕಿಕೊಂಡಿದ್ದ ಕೊಡಗಿನ ಮಹಿಳೆಯನ್ನು ಕ್ಷೇಮವಾಗಿ ಭಾರತಕ್ಕೆ ಕರೆ ತರುವಲ್ಲಿ ಕೊಡಗು ಜಿಲ್ಲಾಡಳಿತ ಯಶಸ್ವಿಯಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು. ಈ ವೇಳೆ ಅವರನ್ನು ಅಲ್ಲಿ ಕೂಡಿ ಹಾಕಲಾಗಿತ್ತು. ಕೊಡಗು ಜಿಲ್ಲಾಡಳಿತಕ್ಕೆ ಈ ಬಗ್ಗೆ ದೂರು ಸ್ವೀಕೃತವಾದ ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಆರ್.ಎಂ. ಅನನ್ಯ ವಾಸುದೇವ್ ಅವರಿಗೆ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಕರೆ ತರುವ ಜವಾಬ್ದಾರಿ ವಹಿಸಿದ್ದರು.
ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಜಿಲ್ಲಾಡಳಿತ ಮಾಹಿತಿ ನೀಡಿತ್ತು. ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರಿ ಕಚೇರಿಯ ಸಹಯೋಗದೊಂದಿಗೆ ಕೊಡಗು ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಭಾರತಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ.
ಮಂಗಳವಾರ ಬೆಳಗ್ಗೆ ಸಂತ್ರಸ್ತ ಮಹಿಳೆ ಚೆನ್ನೈ ತಲುಪಿದ್ದು, ಅಲ್ಲಿಂದ ಕೊಡಗಿಗೆ ಬರುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮೈಸೂರಿನಲ್ಲೂ ಆರಂಭವಾಗಲಿದೆ ಡಬಲ್ ಡೆಕ್ಕರ್ ಬಸ್
Next Article ಭಾರತದ ಆರ್ಥಿಕತೆ ಶೇ. 6.5 ರಷ್ಟು ಬೆಳವಣಿಗೆ ನಿರೀಕ್ಷೆ