ಕೊಡಗು

ಕೊಡಗು ವಿವಿ ರದ್ದತಿಗೆ ಕೊಡವ ಸಮಾಜದ ವಿರೋಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ನೂತನವಾಗಿ ಆರಂಭಿಸಲಾದ ವಿವಿಗಳನ್ನು ಹಣಕಾಸು, ಮೂಲ ಸೌಕರ್ಯಗಳ ಕೊರತೆಯಿಂದ ಮುಚ್ಚುವುದು ಅಥವಾ ಬೇರೆ ವಿವಿಗಳ ಜೊತೆ ವಿಲೀನಗೊಳಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಇದು ಸೂಕ್ತ ನಿರ್ಧಾರವಲ್ಲ. ತಕ್ಷಣ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಕೊಡಗು ವಿಶ್ವವಿದ್ಯಾಲಯ ಸುಮಾರು 100 ಎಕರೆ ಪ್ರದೇಶದಲ್ಲಿ ಆಡಳಿತ ಸೌಧ, ಶೈಕ್ಷಣಿಕ ಕೊಠಡಿಗಳ ಸಂರ್ಕಿರ್ಣ, ಅತ್ಯಾಧುನಿಕ ಪ್ರಯೋಗಾಲಯ ಇತ್ಯಾದಿ ಸೌಲಭ್ಯದೊಂದಿಗೆ ಸುಸಜ್ಜಿತವಾಗಿದೆ. 2010ರಲ್ಲಿ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೂಮಿಪೂಜೆ ನೆರವೇರಿಸಿದ್ದರು. ಆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕಟ್ಟಡವನ್ನು ಉದ್ಘಾಟನೆ ಮಾಡಿದ್ದರು. ಇದಾದ ಬಳಿಕ ಕೊಡಗು ವಿವಿ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿತ್ತು. ಆದರೆ ಇದರ ನಡುವೆಯೇ ಸರಕಾರದ ನಿರ್ಣಯ ಜಿಲ್ಲೆಗೆ ಅಘಾತವುಂಟು ಮಾಡಿದ್ದು, ವಿದ್ಯಾರ್ಥಿಗಳು ಸರಕಾರದ ನಿರ್ಣಯದಿಂದ ಅತಂತ್ರ ಸ್ಥಿತಿಗೆ ಸಿಲುಕುವ ಆತಂಕವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವಿಶ್ವ ವಿದ್ಯಾಲಯ ಬೇಕು ಎನ್ನುವ ಚಿಂತಕರ ಹಾಗೂ ವಿದ್ಯಾರ್ಥಿಗಳ ಕನಸು ಸುಮಾರು ಎರಡು ವರ್ಷಗಳ ಹಿಂದೆ ನನಸಾಯಿತು. ಆದರೆ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ವಿವಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಇದು ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು, ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಹೀಗಾಗಿ ವಿವಿ ರದ್ದತಿ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.

ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಗುರಿ ಸಾಧನೆಗೆ ಕೊಡಗು ವಿವಿ ಹೆಚ್ಚು ಉಪಯುಕ್ತವಾಗಿತ್ತು. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೂ ಪೂರಕವಾಗಿತ್ತು. ಗುಡ್ಡಗಾಡು ಪ್ರದೇಶವಾದ ಕೊಡಗಿನಲ್ಲಿದ್ದ ವಿವಿಯನ್ನು ಹಲವು ವಿದ್ಯಾರ್ಥಿಗಳು ಆಶ್ರಯಿಸಿದ್ದರು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ದೂರದೂರಿಗೆ ತೆರಳುವುದು ತಪ್ಪಿತ್ತು ಎಂದು ಸಂಭ್ರಮಿಸುವಷ್ಟರಲ್ಲಿಯೇ ಸರಕಾರದ ನಿರ್ಣಯದಿಂದ ಮತ್ತೆ ವಿದ್ಯಾರ್ಥಿಗಳು ಕೂಡ ಕಂಗಾಲಾಗಿದ್ದಾರೆ. ಕೊಡಗು ವಿವಿಯಲ್ಲಿ ಬಡ ವಿದ್ಯಾರ್ಥಿಗಳೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಿದ್ದಾರೆ ಹಾಗೂ ಕೊಡಗಿನ ಪ್ರಗತಿಗೆ ವಿವಿ ಹೆಚ್ಚು ಸಹಕಾರಿಯಾಗಿದೆ.ಅಲ್ಲದೆ ಬಯಲು ಸೀಮೆಯ ಮತ್ತು ಕೊಡಗಿಗೂ ಇರುವ ವ್ಯತ್ಯಾಸಗಳನ್ನು ಸರಕಾರ ಮರೆತಿರುವಂತಿದೆ, ಮಳೆಗಾಲ ಎದುರಾದೊಡನೆ ಮಳೆಗಾಳಿಯ ಅರ್ಭಟ, ಅಲ್ಲಲ್ಲಿ ಧರೆಗುರುಳುವ ಮರಗಳು, ಅಲ್ಲಲ್ಲಿ, ಭೂಕುಸಿತ, ರಸ್ತೆ , ವಿದ್ಯುತ್ ಸಂಪರ್ಕವಿಲ್ಲದೆ ಕಾರ್ಗತ್ತಲಲ್ಲಿ ಮುಳುಗುವ ಕೊಡಗು… ಅದರಲ್ಲೂ ಗ್ರಾಮೀಣ ವರ್ಗದ ಜನರ ಅಧೋಗತಿ… ಇವುಗಳನ್ನೆಲ್ಲ ಸoಭoದಪಟ್ಟವರು ಮರೆತಂತಿದೆ . ವಿವಿಯನ್ನು ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಹಿಂದೆ ಸರಿಯಬಾರದು ಎಂದು ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ  ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 mins ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

7 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

12 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

19 mins ago

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

12 hours ago