ಕೊಡಗು

ಹದಗೆಟ್ಟ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ; ಸಂಚಾರ ದುಸ್ತರ

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ

ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳು ನಿರ್ಮಾಣಗೊಂಡು ಸವಾರರು ಸಂಚರಿಸಲು ಪರದಾಡುವಂತಾಗಿದೆ.

ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ ಸಿದ್ದಾಪುರದಿಂದ ನೆಲ್ಯಹುದಿಕೇರಿಗೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ರಸ್ತೆಯಲ್ಲಿ ಬೃಹತ್ ಗುಂಡಿಗಳು ಸೃಷ್ಟಿಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕಳೆದ ಮೂರು ತಿಂಗಳ ಹಿಂದೆ ಈ ರಸ್ತೆಗೆ ತೇಪೆ ಹಚ್ಚುವ ಕಾರ್ಯ ನಡೆದಿತ್ತು. ಬಳಿಕ ಮಳೆಗಾಲ ಆರಂಭವಾಗುತ್ತಿದ್ದಂತೆ ರಸ್ತೆ ಮಧ್ಯೆ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.

ಸಿದ್ದಾಪುರದಿಂದ ಚೆಟ್ಟಳ್ಳಿ, ಮಡಿಕೇರಿ, ಮರಗೋಡು, ಕುಶಾಲನಗರಕ್ಕೆ ತೆರಳಲು ಇರುವ ಏಕೈಕ ರಸ್ತೆ ಇದಾಗಿದ್ದು, ದಿನಕ್ಕೆ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಕಳೆದ ೧೫ ವರ್ಷಗಳ ಹಿಂದೆ ಕಾವೇರಿ ನದಿಗೆ ಸೇತುವೆ ನಿರ್ಮಾಣ ಸಂದರ್ಭದಲ್ಲಿ ರಸ್ತೆಗೆ ಡಾಂಬರು ಹಾಕಲಾಗಿತ್ತು. ನಂತರದ ಪ್ರತಿ ವರ್ಷ ಕೇವಲ ಗುಂಡಿ ಇದ್ದಲ್ಲಿ ಮಾತ್ರ ಸಣ್ಣದಾಗಿ ಕಾಮಗಾರಿ ನಡೆಸಲಾಗುತ್ತಿರುವುದರಿಂದ ಹೊಂಡಗಳ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.

ವಿದ್ಯಾರ್ಥಿಗಳು, ವಯೋವೃದ್ಧರು, ಸಾರ್ವಜನಿಕರು ದಿನಂಪ್ರತಿ ಸಂಚರಿಸುವ ಈ ರಸ್ತೆಗಳಲ್ಲಿ ನಡೆದಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲನೆ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿರುವ ಬಡಪಾಯಿಗಳು ದುಡಿದ ಹಣವನ್ನು ಗ್ಯಾರೇಜ್‌ಗೆ ಖರ್ಚು ಮಾಡುವಂತಾಗಿದೆ. ಕಲ್ಲು ಮಿಶ್ರಣವನ್ನಾದರೂ ಹಾಕಿ ತಾತ್ಕಾಲಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಈ ಬಗ್ಗೆ ಗಮನಹರಿಸುತ್ತಿಲ್ಲ. ಓಟ್ ಬ್ಯಾಂಕ್ ದೃಷ್ಟಿಯಿಂದ ಖಾಸಗಿ ರಸ್ತೆ ಅಭಿವೃದ್ಧಿಪಡಿಸುತ್ತಿರುವ ಜನಪ್ರತಿನಿಧಿಗಳು, ಮುಖ್ಯ ರಸ್ತೆಯ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ. ಆಡಳಿತ ವ್ಯವಸ್ಥೆ ಜಾಣ ನಿದ್ರೆಗೆ ಜಾರಿರುವುದಕ್ಕೆ ಹಿಡಿದ ಕೈಗನ್ನಡಿ ಇದಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಸ್ತೆಯಲ್ಲಿ ಸೃಷ್ಟಿಯಾಗಿರುವ ಬೃಹತ್ ಹೊಂಡಗಳನ್ನು ತಾತ್ಕಲಿಕವಾಗಿ ಮುಚ್ಚುವ ಕಾಮಗಾರಿ ನಡೆಸಬೇಕು. ಮಳೆಗಾಲ ಮುಗಿದ ಬಳಿಕ ರಸ್ತೆಗೆ ಸಂಪೂರ್ಣ ಡಾಂಬರೀಕರಣ ಮಾಡುವ ಮೂಲಕ ಸಮಸ್ಯೆಗೆ ಹರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

29 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

54 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago