ಕೊಡಗು

ಕುಶಾಲನಗರ| ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ.

ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ.

ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ ರಥಬೀದಿಯ ತಂದೆಯ ಫ್ಯಾನ್ಸಿ ಸ್ಟೋರ್ನಲ್ಲಿ ನೆರವಾಗುತ್ತಿದ್ದಳು. ಡಿ. 8 ರಂದು ಮೊಬೈಲ್ ವಿಚಾರವಾಗಿ ಭಾವನ ಹಾಗೂ ಆಕೆಯ ಸಹೋದರ ಮಹಿಪಾಲ್ ನಡುವೆ ಜಗಳವಾಗಿದೆ. ಈ‌ ಸಂದರ್ಭ ಭಾವನ ಅಂಗಡಿಯಿಂದ ಹೊರತೆರಳಿದ್ದು ಇದುವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂದು ಯುವತಿ ಮೃತದೇಹ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ದೊರೆತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

8 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

10 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

16 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago