Categories: ಕೊಡಗು

ಕುಶಾಲನಗರ: ನ. 19 ರಂದು ಗಣಪತಿ ರಥೋತ್ಸ ವ

ಪುನೀತ್ ಮಡಿಕೇರಿ

ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.

ಯಶಸ್ವಿ ಸಂಘಟಕರಾಗಿರುವ ಉದ್ಯಮಿ ಎಂ. ಕೆ. ದಿನೇಶ್ ಅವರು ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯPರಾದ ನಂತರ ಅವರಿಗೆ ಇದು ಮೊದಲ ಜಾತ್ರೋತ್ಸವವಾಗಿದ್ದು, ಸ್ಥಳೀಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಕೊಡಗು, ಮೈಸೂರು ಹಾಗೂ ಹಾಸನ ಜಿಗಳ ವಾತಾವರಣ ಮತ್ತು ಸಂಸ್ಕೃತಿಗಳ ಸಂಗಮವಾಗಿ ರುವ ಕೊಡಗಿನ ವಾಣಿಜ್ಯನಗರಿ ಕುಶಾಲ ನಗರದಲ್ಲಿ ಪ್ರತಿ ವರ್ಷ ನಡೆಯುವ ಶ್ರೀ ಗಣಪತಿ ರಥೋತ್ಸವಕ್ಕೆ ಈ ಮೂರೂ ಜಿಗಳ ಜನತೆ ಸಾಕ್ಷಿಯಾಗುವುದು ವಿಶೇಷ. ಈ ವರ್ಷ ಗಣಪತಿ ರಥೋತ್ಸವವು ನ. ೧೯ರ ಮಂಗಳವಾರ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ. ನ. ೨೫ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

೧೯೫೫ರ ತನಕ ೩ ದಿನಗಳ ಕಾಲ ನಡೆಯುತ್ತಿದ್ದ ಶ್ರೀ ಗಣಪತಿ ಜಾತ್ರೋತ್ಸವ ೧೯೫೮ರಲ್ಲಿ ೭ ದಿನಗಳಿಗೆ ವಿಸ್ತರಣೆಯಾಯಿತು. ಈಗ ೧೦ ದಿನಗಳವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜಾತ್ರೋತ್ಸವ ನಡೆಯುತ್ತಿದೆ.

ನ. ೧೬ರಿಂದ ಶ್ರೀ ಗಣಪತಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಪುಣ್ಯಾಹ, ನಾಂದಿ, ರಕ್ಷಾಬಂಧನ, ಅಂಕುರಾರ್ಪಣ, ಕಳಸ ಸ್ಥಾಪನೆ, ನವಗ್ರಹ ಹೋಮ ಹೀಗೆ ಆರಂಭವಾಗುವ ಧಾರ್ಮಿಕ ವಿಽ-ವಿಧಾನಗಳು ನ. ೨೫ರವರೆಗೂ ನಡೆಯ ಲಿವೆ. ಚಂದ್ರಬಿಂಬೋತ್ಸವ ಪಲ್ಲಕ್ಕಿ ಸೇವೆಯನ್ನು ಈ ಬಾರಿ ವಿಶಿಷ್ಟವಾಗಿ ನಡೆಸಲಾಗುವುದು ಎಂದು ದೇವಾಲಯದ ಪ್ರಧಾನ ಅರ್ಚಕ ಆರ್. ಕೆ. ನಾಗೇಂದ್ರ ಬಾಬು ಮಾಹಿತಿ ನೀಡಿದ್ದಾರೆ.

ಪ್ರಮುಖ ಆಕರ್ಷಣೆ ಗೋವುಗಳ ಜಾತ್ರೆ: ಕುಶಾಲನಗರ ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ಗೋವುಗಳ ಜಾತ್ರೆಯೂ ಒಂದು. ಕುಶಾಲನಗರ ಮಾತ್ರವಲ್ಲದೆ ಪಕ್ಕದ ಮೈಸೂರು ಜಿಯ ಪಿರಿಯಾಪಟ್ಟಣ ತಾಲ್ಲೂಕು ಮತ್ತು ಹಾಸನ ಜಿಯ ಅರಕಲಗೂಡು ತಾಲ್ಲೂಕಿನ ರೈತರು ಕೂಡ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಗೋವು ಪ್ರದರ್ಶನದ ಜತೆಗೆ ಗೋವುಗಳ ಮಾರಾಟವೂ ನಡೆಯುತ್ತಿದ್ದ ಕಾರಣ ದೊಡ್ಡ ಮಟ್ಟದ ವ್ಯವಹಾರವೂ ನಡೆಯುತ್ತಿತ್ತು. ಆದರೆ ವಿವಿಧ ಕಾರಣಗಳಿಂದ ಕೆಲವು ವರ್ಷಗಳಿಂದ ಈ ಗೋವು ಜಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಈ ವರ್ಷ ಮರು ಚಾಲನೆ ನೀಡಲಾಗುತ್ತಿದೆ. ಹಳೆಯ ವೈಭವದೊಂದಿಗೆ ಆಧುನಿಕತೆಯ ಸ್ಪರ್ಶ ನೀಡಿ ಗೋವು ಜಾತ್ರೆ ನಡೆಸಲು ದೇವಾಲಯ ಸಮಿತಿ ನಿರ್ಧರಿಸಿದೆ. ಈ ಸಂಬಂಧ ಈಗಾಗಲೇ ಸುತ್ತ ಮುತ್ತಲ ವ್ಯಾಪ್ತಿಯ ರೈತರ ಜತೆ ಚರ್ಚೆಯನ್ನೂ ನಡೆಸಲಾಗಿದ್ದು, ಉತ್ತಮ ಸ್ಪಂದನೆ ಸಿಕ್ಕಿರುವುದು ಸಮಿತಿ ಸದಸ್ಯರ ಉತ್ಸಾಹವನ್ನು ಹೆಚ್ಚಿಸಿದೆ. ಡಿ. ೭, ೮ ಹಾಗೂ ೯ರಂದು ಜಾತ್ರಾ ಮೈದಾನದಲ್ಲಿ ಗೋವು ಜಾತ್ರೆ ಏರ್ಪಡಿಸಲಾಗಿದೆ. ಇಲ್ಲಿ ಭಾಗವಹಿಸುವ ರೈತರಿಗೆ ಮತ್ತು ಗೋವುಗಳಿಗೆ ಸಮಿತಿ ವತಿಯಿಂದ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಗೋವುಗಳ ಪ್ರದರ್ಶನವೂ ಇರುವುದರಿಂದ ವಿವಿಧ ವಿಭಾಗಗಳಲ್ಲಿ ಬಹುಮಾನವನ್ನೂ ಕೊಡಲು ನಿರ್ಧರಿಸಲಾಗಿದೆ.

ಕೃಷಿ ಮೇಳ, ಸಾಂಸ್ಕೃತಿಕ ಕಾರ್ಯಕ್ರಮ: ಇದೇ ಮೊದಲ ಬಾರಿಗೆ ಕೃಷಿ ಮೇಳವನ್ನು ಆಯೋಜಿಸಿರುವುದು ಜಾತ್ರೋತ್ಸವದ ವಿಶೇಷ ವಾಗಿದೆ. ಕೃಷಿಯಲ್ಲಿ ಆಧುನಿಕತೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟಕ್ಕೂ ಇಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಜಾತ್ರೋತ್ಸವದಲ್ಲಿ ಆಕರ್ಷಣೀಯ ಕಾರ್ಯಕ್ರಮಗಳನ್ನು ಕೊಡಲು ಸಾಂಸ್ಕೃತಿಕ ಸಮಿತಿ ಸಿದ್ಧತೆ ನಡೆಸಿದೆ. ನ. ೧೯ರಂದು ಸಾಂಸ್ಕೃತಿಕ ವೇದಿಕೆ ಉದ್ಘಾಟಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಡಿ. ೧ರ ತನಕ ೧೩ ದಿನಗಳ ಕಾಲವೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ದಿನ ಸಂಜೆ ೭ರಿಂದ ರಾತ್ರಿ ೧೦ ಗಂಟೆಯವರೆಗೆ ಪ್ರಸಿದ್ಧ ಕಲಾವಿದರು, ಸ್ಥಳೀಯ ಪ್ರತಿಭೆಗಳೂ ಇಲ್ಲಿ ಪ್ರದರ್ಶನ ನೀಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

24 mins ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

1 hour ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

1 hour ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

2 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

2 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

2 hours ago