ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ ಬಡಾವಣೆ ನಿವಾಸಿ ಶರತ್ ನಾಯಕ್(೨೫) ಬಂಧಿತ ಆರೋಪಿಗಳು.
ಫೆ.೨೫ರಂದು ಬೈಚನಹಳ್ಳಿಯ ಜಾತ್ರೆ ಮೈದಾನದ ಸಮೀಪದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಮೋದ್ ಕುಮಾರ್ ಹಾಗೂ ದರ್ಶನ್‌ನನ್ನು ಬಂಧಿಸಿದ್ದಾರೆ. ಜೊತೆಗೆ ೨೫ ಗ್ರಾಂ ಗಾಂಜಾ ವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಫೆ.೨೬ರಂದು ಬೈಚನಹಳ್ಳಿಯ ರೈತ ಸಹಕಾರ ಭವನದ ಸಮೀಪ ಗಾಂಜಾ ಬಳಕೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮತ್ತೆ ಪೊಲೀಸರ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ರವಿಕುಮಾರ್, ನಿಖಿಲ್ ಕುಮಾರ್, ಶರತ್ ನಾಯಕ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸೋಮವಾರಪೇಟೆ ಉಪವಿಭಾಗ ಡಿಎಸ್‌ಪಿ ಆರ್.ವಿ.ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುಶಾಲನಗರ ನಗರ ಪೊಲೀಸ್ ಠಾಣೆಯ ಪಿಐ ಬಿ.ಜಿ. ಪ್ರಕಾಶ್ , ಪಿಎಸ್‌ಐ ಗೀತಾ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…