ಕುಶಾಲನಗರ: ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸೀಗೆಹೊಸೂರು ಎಂಬ ಗ್ರಾಮದ ಬಸವರಾಜು ಎಂಬುವವರ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು.
ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣವೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.





